ನವದೆಹಲಿ : ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಿದ ಪರಿಣಾಮ ದೇಶದ ಆರ್ಥಿಕತೆಗೆ ಪೆಟ್ಟು ಬಿದ್ದಿದ್ದು, ಇದರಿಂದ ದೇಶ ಸಂಕಷ್ಟ ಎದುರಿಸುವ ಸಂಭವವಿದೆ ಎಂದು ಜನತೆ ಆತಂಕಗೊಂಡಿದ್ದರು. ಆದರೆ ಪ್ರಧಾನಿ ಮೋದಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಅನ್ ಲಾಕ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ, ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಮೇ ತಿಂಗಳಿನಲ್ಲಿ ಅತಿ ಹೆಚ್ಚು ರಸಗೊಬ್ಬರ ಮಾರಾಟವಾಗಿದೆ. ದ್ವಿಚಕ್ರ ವಾಹನಗಳ ಮಾರಾಟ ಹೆಚ್ಚಾಗಿದೆ. ಡಿಜಿಟಲ್ ವ್ಯವಹಾರಗಳು ಅಭಿವೃದ್ಧಿ ಕಾಣುತ್ತಿವೆ. ಅಲಲ್ದೇ ಸಣ್ಣ ಮತ್ತು ಮಧ್ಯಮ ಉದ್ಯಮಗಳು ಸರ್ಕಾರದ ವಿಶೇಷ ಪ್ಯಾಕೇಜ್ ಗಳಿಂದ ಚೇತರಿಕೆ ಕಾಣುತ್ತಿದ್ದು, ಈ ಬೆಳವಣೆಗೆ ಮುಂದೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಲಿದೆ ಎಂದು ಹೇಳಿದ್ದಾರೆ.
ಅಲ್ಲದೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಂಖ್ಯೆ ಶೇ.50ಕ್ಕಿಂತ ಹೆಚ್ಚಾಗಿದೆ. ಆದಕಾರಣ ಕೊರೊನಾ ವೈರಸ್ ಬಗ್ಗೆ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.