ಸ್ನೇಹಿತನ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

ಶುಕ್ರವಾರ, 1 ಮಾರ್ಚ್ 2019 (06:53 IST)
ಗುಜರಾತ್ : ಪತಿಯೊಬ್ಬ ಮೊಬೈಲ್ ನಲ್ಲಿ ಮಾತನಾಡಿದ್ದಕ್ಕೆ ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಆಘಾತಕಾರಿ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ.


ಪತ್ನಿ ಸ್ನೇಹಿತನ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ನಂತರ ಮೊಬೈಲ್ ನಲ್ಲಿ ರೆಕಾರ್ಡ್ ಆಗಿದ್ದ ಮಾತುಗಳನ್ನು ಕೇಳಿದ ಪತಿ ಇಬ್ಬರ ಮಧ್ಯೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಪ್ರಶ್ನಿಸಿದ್ದಾನೆ. ಆದರೆ ಪತ್ನಿ ಇದನ್ನು ಅಲ್ಲಗೆಳೆದು ಮಕ್ಕಳ ಮೇಲೆ ಪ್ರಮಾಣ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಪತಿ ಪತ್ನಿಗೆ ಬೆಲ್ಟ್ ನಿಂದ ಹೊಡೆದು ಆಕೆಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪತ್ನಿ ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ದಾಖಲಾಗುತ್ತಿದ್ದಂತೆ ಪತಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ