ಪತ್ನಿಯ ಶೀಲ ಶಂಕಿಸಿದ ಪತಿ ಮಾಡಿದ್ದೇನು ಗೊತ್ತಾ?

ಸೋಮವಾರ, 27 ನವೆಂಬರ್ 2023 (10:23 IST)
ಮದುವೆಯಾಗಿ 7 ವರ್ಷವಾದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಪತ್ನಿಯ ನಡತೆ ಬಗ್ಗೆ ಆಗಾಗ ಸಂಶಯಪಡುತ್ತಿದ್ದ
ಶರೀಫ್  ರಾತ್ರಿ ಇದೇ ವಿಚಾರಕ್ಕೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ಹೋಗಿ ಶರೀಫ್ ಪತ್ನಿಗೆ 30ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ವರದಿಯಾಗಿದೆ.
 
ಜುಬೈದ(25) ಮೃತಪಟ್ಟ ಪತ್ನಿ. ಶರೀಫ್(27) ಕೊಲೆ ಮಾಡಿದ ಆರೋಪಿ. ಪತ್ನಿಯ ನಡೆತೆ ಸರಿಯಿಲ್ಲ ಎಂದು ಅನುಮಾನಗೊಂಡ ಪತಿಯೊಬ್ಬ ಆಕೆಗೆ 30ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಮಡಿಕೇರಿಯಲ್ಲಿ ನಡೆದಿದೆ.
 
ಈ ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ