ಇಂಡಿಯಾ ಹೆಸರನ್ನು ಭಾರತ ಎಂದು ಬದಲಾಯಿಸುವ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು ಗೊತ್ತಾ?

ಗುರುವಾರ, 4 ಜೂನ್ 2020 (08:06 IST)
ನವದೆಹಲಿ : ನಮ್ಮ ದೇಶದ ಹೆಸರನ್ನು ಬದಲಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಬದಲಾಯಿಸಲು ನಮಗೆ ಸಾಧ್ಯವಿಲ್ಲ ಎಂದು ತಿಳಿಸುವುದರ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.


ದೆಹಲಿ ಮೂಲದ ವಕೀಲ ಅಶ್ವಿನ್ ವೈಶ್ಯ ಎಂಬುವವರು  ಬ್ರಿಟಿಷರಿಟ್ಟ ‘ಇಂಡಿಯಾ’ ಹೆಸರನ್ನು ‘ಭಾರತ’ ಅಥವಾ ‘ಹಿಂದೂಸ್ತಾನ್’ ಎಂದು ಮರುನಾಮಕರಣ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು .


ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,  ಭಾರತದ ಸಂವಿಧಾನದಲ್ಲಿ ಭಾರತಕ್ಕೆ ಹಲವು ಹೆಸರುಗಳು ಉಲ್ಲೇಖವಾಗಿದೆ. ಆದಕಾರಣ ಹೆಸರನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ. ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು. ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ