ವಿದ್ಯಾರ್ಥಿಗಳಿಗೆ ಟ್ಯೂಷನ್​ ಹೇಳಿಕೊಡುವ ಬದಲು ಶಿಕ್ಷಕ ಮಾಡಿದ್ದೇನು ಗೊತ್ತಾ?

ಶನಿವಾರ, 25 ಆಗಸ್ಟ್ 2018 (14:05 IST)
ನವದೆಹಲಿ : ಗುರು ವಿದ್ಯಾರ್ಥಿಗಳನ್ನು ಸನ್ಮಾರ್ಗದ ಕಡೆಗೆ ಕರೆದೊಯ್ಯುವ ಕಾರಣ ಆತನನ್ನು ದೇವರುಗಳಾದ  ತ್ರಿಮೂರ್ತಿಗಳಿಗೆ ಹೋಲಿಸುತ್ತಾರೆ. ಆದರೆ ನವದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿಗಳನ್ನು ಕೆಟ್ಟ ಕಾರ್ಯವೊಂದನ್ನು ಮಾಡುವಂತೆ ಒತ್ತಾಯ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಹೌದು ನವದೆಹಲಿಯ ನಾತುಪುರ ಹಿರಿಯ ಮಾಧ್ಯಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಬಾಲಮುಕುಂದ ಎಂಬಾತ ವಿದ್ಯಾರ್ಥಿಯನ್ನು ಟ್ಯೂಷನ್​ ಮಾಡುವುದಾಗಿ ಕರೆದು, ಇಂತಹ ಅಸಹ್ಯ ಕೃತ್ಯ ಮಾಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಅಲ್ಲಿಯೇ ಇದ್ದ ಮತ್ತೊಬ್ಬ  ವಿದ್ಯಾರ್ಥಿ ಈ ಘಟನೆಯನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿ ವೈರಲ್  ಮಾಡಿದ್ದಾನೆ.

 

ಈ ವಿಷಯ ತಿಳಿದ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿ, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ನಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಇದೀಗ  ಶಿಕ್ಷಕನನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ