ವ್ಯಕ್ತಿಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 116 ಕಬ್ಬಿಣದ ಮೊಳೆಗಳನ್ನು ಹೊರತೆಗೆದ ವೈದ್ಯರು

ಬುಧವಾರ, 15 ಮೇ 2019 (14:12 IST)
ಜೈಪುರ : ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ ಇದ್ದ ಬರೋಬ್ಬರಿ 116 ಕಬ್ಬಿಣದ ಮೊಳೆಗಳು ಹಾಗೂ ವೈರ್ ಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ಘಟನೆ ರಾಜಸ್ಥಾನದ ಬುಂಡಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.




ಭೋಲಾ ಶಂಕರ್(42) ಎಂಬುವವರು ಭಾನುವಾರದಂದು ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ವೈದ್ಯರು ಅವರ ಎಕ್ಸ್-ರೇ ಮಾಡಿದಾಗ ಹೊಟ್ಟೆಯಲ್ಲಿ ಮೊಳೆಗಳು ಹಾಗೂ ವೈರ್ ಗಳು ಇರುವುದು ತಿಳಿದಿದೆ. ಆದಕಾರಣ ಸೋಮವಾರದಂದು ರೋಗಿಗೆ ಒಂದೂವರೆ ಗಂಟೆಗಳ ಕಾಲ  ಶಸ್ತ್ರಚಿಕಿತ್ಸೆ ಮಾಡಿ ಕಬ್ಬಿಣದ ಮೊಳೆಗಳು ಹಾಗೂ ವೈರ್ ಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಅದರಲ್ಲಿ ಬಹುತೇಕ ಮೊಳೆಗಳು 6.5 ಸೆ.ಮೀ ಉದ್ದವಿತ್ತು ಎಂದು ವೈದ್ಯರು ತಿಳಿಸಿದ್ದಾರೆ.


ಆದರೆ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಭೋಲಾ ಶಂಕರ್ ಹೊಟ್ಟೆಯೊಳಗೆ ಈ ಕಬ್ಬಿಣದ ವಸ್ತುಗಳು ಹೇಗೆ ಸೇರಿತು ಎನ್ನುವ ಬಗ್ಗೆ ಆತನಿಗಾಗಲಿ, ಆತನ ಮನೆಯವರಿಗಾಗಲಿ ಗೊತ್ತಿರಲಿಲ್ಲ ಎಂಬುದೇ ಒಂದು ವಿಚಿತ್ರ ಸಂಗತಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ