ಭಾರತದಲ್ಲಿ ಮುಸ್ಲಿಂರನ್ನು ಬಾಡಿಗೆದಾರರ ರೀತಿಯಲ್ಲಿ ಕಾಣಲಾಗುತ್ತಿದೆ ಎಂದು ಅಜಂಖಾನ್ ಹೇಳಿದ್ಯಾಕೆ?
ಮಂಗಳವಾರ, 12 ಮಾರ್ಚ್ 2019 (13:08 IST)
ಲಖನೌ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಭಾರತದಲ್ಲಿ ಮುಸ್ಲಿಂರನ್ನು ಬಾಡಿಗೆದಾರರ ರೀತಿಯಲ್ಲಿ ಕಾಣಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಸ್ಲಿಂ ಪವಿತ್ರ ಹಬ್ಬ ರಂಜಾನ್ ಜೊತೆಗೆ ಚುನಾವಣಾ ದಿನಾಂಕ ಇದೆ. ಈ ಕುರಿತು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು,’ ಚುನಾವಣೆ ದಿನಾಂಕ ಬದಲಾವಣೆ ಉತ್ತಮವಾದುದ್ದಲ್ಲ ಆದರೆ, ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಈ ಬಗ್ಗೆ ಯೋಚಿಸಬೇಕಾಗಿತ್ತು. ಚುನಾವಣಾ ಆಯೋಗ ಈ ಬಗ್ಗೆ ಚಿಂತೆ ಮಾಡಿಲ್ಲ ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ. ರಾಜಕೀಯ ಪಕ್ಷಗಳ ಸೇರಿದಂತೆ ಎಲ್ಲರನ್ನೂ ಸಮಾನ ರೀತಿಯಲ್ಲಿ ಕಾಣಬೇಕಾಗುತ್ತದೆ.ರಂಜಾನ್ ಹಬ್ಬ ಮುಸ್ಲಿಂರಿಗೆ ಪವಿತ್ರ ಹಬ್ಬವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.