ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಕೇಜ್ರಿವಾಲ್

ಬುಧವಾರ, 22 ಮಾರ್ಚ್ 2023 (14:57 IST)
ನವದೆಹಲಿ : ದೆಹಲಿ ಬಜೆಟ್ ಅನ್ನು ತಡೆಯಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಮೋದಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.
 
ದೇಶದ 75 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯ ಬಜೆಟ್ ಅನ್ನು ನಿಲ್ಲಿಸಲಾಗಿದೆ. ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ. ದೆಹಲಿಯ ಜನರು ತಮ್ಮ ಬಜೆಟ್ ಅನ್ನು ಅಂಗೀಕರಿಸಲು ಕೈಜೋಡಿಸಿ ಎಂದು ಮನವಿ ಮಾಡುತ್ತೇನೆ ಎಂದು ಬರೆದಿದ್ದಾರೆ.

ದೆಹಲಿಯಲ್ಲಿ ತಲಾ ಆದಾಯ ಹೆಚ್ಚಾಗಿದೆ. ಪ್ರತಿನಿತ್ಯದ ಎಲ್ಲ ಅಡೆತಡೆಗಳನ್ನು ಮೀರಿ ದೆಹಲಿಯ ಆಡಳಿತ ಉತ್ತಮವಾಗಿದೆ. ಯಾವುದೇ ಅಡತಡೆಗಳಿಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಒಟ್ಟಾಗಿ ಕೆಲಸ ಮಾಡಿದ್ದರೆ ದೆಹಲಿಯ ಅಭಿವೃದ್ಧಿಯನ್ನು ಊಹಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ