ಡೊನಾಲ್ಡ್ ಟ್ರಂಪ್‌ಗೆ ಸಂಕಷ್ಟ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಸರ್ಕಾರದ ಗೌಪ್ಯ ದಾಖಲೆಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿಬಂದಿದೆ. ಅವರ ವಿರುದ್ದ ದೋಷಾರೋಪಣೆ ಹೊರಿಸಲಾಗಿದ್ದು, ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ. ಮುಂದಿನ ವರ್ಷ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಚುನಾವಣೆಗೂ ಮುನ್ನ ಅಮೆರಿಕದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಗಮನ ಸೆಳೆಯುತ್ತಿವೆ. ಇದು ಟ್ರಂಪ್‌ಗೆ ಹಿನ್ನಡೆ ಎಂದೇ ಹೇಳಲಾಗುತ್ತಿದೆ. ಶ್ವೇತಭವನದಿಂದ ಹೊರಬಂದ ನಂತರವೂ ಟ್ರಂಪ್ ತಮ್ಮ ಬಳಿ ನೂರಾರು ರಹಸ್ಯ ದಾಖಲೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಸುಳ್ಳು ಹೇಳಿಕೆಗಳನ್ನೂ ನೀಡಿದ್ದಾರೆ. ತನಿಖಾ ಸಂಸ್ಥೆಗಳು ಟ್ರಂಪ್ ವಿರುದ್ಧ ಏಳು ಕೇಂದ್ರೀಯ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.