ಲಕ್ನೋ : 78 ವರ್ಷದ ವೃದ್ಧೆಯೊಬ್ಬಳಿಗೆ 82ರ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯ ಮೇಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದ ಚಕೇರಿ ಪ್ರದೇಶದಲ್ಲಿ ವೃದ್ಧ ಪತಿ, ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಸಂತ್ರಸ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಆಕೆಯ ದೂರಿನ ಮೇರೆಗೆ ಪೊಲೀಸರು ವೃದ್ಧೆಯ ಪತಿ ಗಣೇಶ್ ನರೇನ್ ಶುಕ್ಲಾ ಮತ್ತು ಅವರ ಅಳಿಯ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.