ರಾಜ್ಯಸಭೆಗೆ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ

ಗುರುವಾರ, 7 ಜುಲೈ 2022 (09:24 IST)
ನವದೆಹಲಿ : ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ. ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ