ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ಜಪಾನ್ ನ ಡಾ.ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳು ಮಂಗಳವಾರ ಸಭೆ ನಡೆಸಿ ಸಹಿ ಹಾಕಿದ್ದವು .
ಆದಕಾರಣ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ನೇಮಕಗೊಂಡಿದ್ದು, ಈ ಕಾರ್ಯಕಾರಿ ಮಂಡಳಿಯು 34 ಮಂದಿ ಸದಸ್ಯರನ್ನು ಹೊಂದಿದೆ. ಇದು ಪೂರ್ಣ ಪ್ರಮಾಣದ ಹುದ್ದೆಯಲ್ಲ, ಆದರೆ ಅಧ್ಯಕ್ಷರಾದವರು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಭಾಗವಹಿಸಬೇಕಾಗುತ್ತದೆ.