Dr Manamohan Singh: ಡಾ ಮನಮೋಹನ್ ಸಿಂಗ್ ಅಂತಿಮ ಯಾತ್ರೆ ಶುರು: ಲೈವ್ ಇಲ್ಲಿದೆ

Krishnaveni K

ಶನಿವಾರ, 28 ಡಿಸೆಂಬರ್ 2024 (10:27 IST)
ನವದೆಹಲಿ: ಅಗಲಿದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಂತಿಮ ಯಾತ್ರೆ ಆರಂಭವಾಗಿದೆ. ದೆಹಲಿಯಲ್ಲಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತಿಮ ಕ್ರಿಯೆ ನಡೆಯಲಿದೆ.

ಮೊನ್ನೆ ರಾತ್ರಿ ವಯೋಸಹಜ ಅನಾರೋಗ್ಯದಿಂದಾಗಿ ಮನಮೋಹನ್ ಸಿಂಗ್ ಸಾವನ್ನಪ್ಪಿದ್ದರು. ಅವರ ಪುತ್ರಿಯ ಆಗಮನದ ಬಳಿಕ ಇಂದು ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ನಡೆಯಲಿದೆ. ಇದಕ್ಕೆ ಮೊದಲು ಎಐಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಅದಾದ ಬಳಿಕ ಹೂವಿನಿಂದ ಅಲಂಕೃತಗೊಂಡ ವಾಹನದಲ್ಲಿ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ನಡೆಯುತ್ತಿದೆ.
ಈ ವೇಳೆ ಬಿಗಿ ಭದ್ರತೆ ಒದಗಿಸಲಾಗಿದೆ. ರಸ್ತೆಯ ಇಕ್ಕೆಲೆಗಳಲ್ಲಿ ಸಾಕಷ್ಟು ಜನ ನಿಂತು ಮಾಜಿ ಪ್ರಧಾನಿಯನ್ನು ಬೀಳ್ಕೊಡುತ್ತಿದ್ದಾರೆ. ಅಂತಿಮ ಕ್ರಿಯೆಯಲ್ಲಿ ಕುಟುಂಬಸ್ಥರ ಜೊತೆಗೆ ಕಾಂಗ್ರೆಸ್ ನಾಯಕರು ಭಾಗಿಯಾಗುವ ನಿರೀಕ್ಷೆಯಿದೆ. ಬಳಿಕ ಮನಮೋಹನ್ ಸಿಂಗ್ ಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯಂತೆ ಗೌರವ ಸ್ಮಾರಕ ನಿರ್ಮಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ