ಮದ್ಯ ವ್ಯಸನಿ ರಿಕ್ಷಾ ಚಾಲಕನಿಂದ ಪೊಲೀಸ್ ಪೇದೆಯ ಮೇಲೆ ಹಲ್ಲೆ

ಗುರುವಾರ, 1 ಅಕ್ಟೋಬರ್ 2015 (14:43 IST)
ಕುಡಿದ ಮತ್ತಿನಲ್ಲಿ ರಿಕ್ಷಾ ಚಾಲಕನೊಬ್ಬ ಸಂಚಾರಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿದ ದಾರುಣ ಘಟನೆ ದೆಹಲಿಯ ಮಧು ವಿಹಾರ್ ಪ್ರದೇಶದಲ್ಲಿ ನಡೆದಿದೆ.
 
ನಿನ್ನೆ ಸಂಜೆ 6.30 ಗಂಟೆಗೆ ರಿಕ್ಷಾ ಚಾಲಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡ ಸಂಚಾರಿ ಪೊಲೀಸ್ ಪೇದೆ ತಡೆಯಲು ಹೋದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 
 
ಪೊಲೀಸ್ ಪೇದೆ ತಡೆಯಲು ಯತ್ನಿಸಿದಾಗ ಕುಡಿದ ಮತ್ತಿನಲ್ಲಿದ್ದ ರಿಕ್ಷಾ ಚಾಲಕ ಪೇದೆಯ ಮೇಲೆ ಹಲ್ಲೆ ಮಾಡಿದ್ದಾನೆ. ರಿಕ್ಷಾ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ಆರೋಪಿ ರಿಕ್ಷಾ ಚಾಲಕ ಕುಡಿದ ಮತ್ತಿನಲ್ಲಿದ್ದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 

ವೆಬ್ದುನಿಯಾವನ್ನು ಓದಿ