ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ನಡೆದ ವಿಚಾರ ಸಂಕೀರಣದಲ್ಲಿ ಪಾಲ್ಗೊಳ್ಳುವಂತೆ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌ಗೆ(ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣದ ಆರೋಪಿ) ಆಮಂತ್ರಣ ನೀಡಲಾಗಿತ್ತು. ಇದನ್ನು ವಿರೋಧಿಸಿ ಎಬಿವಿಪಿ, ಕಾಲೇಜು ಆವರಣದಲ್ಲಿ ಗಲಾಟೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಎಬಿವಿಪಿ ವಿರುದ್ಧ ಕ್ಯಾಪ್ಟನ್ ಮನ್ದೀಪ್ ಸಿಂಗ್ ಮಗಳು ಗುರ್ ಮೆಹರ್ ಕೌರ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು.
ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ. ನನಗೆ ಎಬಿವಿಪಿ ಭಯವಿಲ್ಲ. ನಾನು ಒಬ್ಬಂಟಿ ಅಲ್ಲ. ದೇಶದ ಪ್ರತಿಯೊಬ್ಬ ವಿದ್ಯಾರ್ಥಿ ನನ್ನ ಜತೆ ಇದ್ದಾರೆ. #StudentsAgainstABVP"- ಎಂದು ಲೇಡಿ ಶ್ರೀರಾಮ್ ಕಾಲೇಜು ವಿದ್ಯಾರ್ಥಿನಿಯಾದ ಕೌರ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದಳು. ಈ ಪೋಸ್ಟ್ ಪ್ರಕಟಿಸಿದ ಬಳಿಕ ಎಬಿವಿಪಿಯಿಂದ ನನಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬಂದಿವೆ ಎಂದಾಕೆ ದೂರಿದ್ದಳು.