ದಲಿತ ಸಮುದಾಯದ ನಾಯಕನಿಗೆ ಉಪಮುಖ್ಯಮಂತ್ರಿ ಸ್ಥಾನ: ಕೇಜ್ರಿವಾಲ್

ಶನಿವಾರ, 26 ನವೆಂಬರ್ 2016 (19:27 IST)
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ದಲಿತ ನಾಯಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 
 
ರಾಜ್ಯದಲ್ಲಿ ಶೇ.25 ರಷ್ಟು ಮತದಾರರನ್ನು ಹೊಂದಿರುವ ದಲಿತರಿಗಾಗಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸುವ ಸಂದರ್ಭದಲ್ಲಿ ಮಾತನಾಡಿದ ಕೇಜ್ರಿವಾಲ್, ದಲಿತ ವ್ಯಕ್ತಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ.
 
ಆದರೆ, ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಬಗ್ಗೆ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ ಎಂದು ಕಳೆದ ಕೆಲ ದಿನಗಳಿಂದ ಚುನಾವಣೆ ಪ್ರಚಾರದಲ್ಲಿರುವ ಕೇಜ್ರಿವಾಲ್ ಹೇಳಿದ್ದಾರೆ.
 
ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆಯೂ ಆಪ್ ಪಕ್ಷ ನಾಲ್ಕು ಸಂಸದೀಯ ಕ್ಷೇತ್ರಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಇದೀಗ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದೆ. 
 
ಹೈದ್ರಾಬಾದ್‌ ವಿಶ್ವವಿದ್ಯಾಲಯದಲ್ಲಿ ರೋಹಿತ್ ವೆಮುಲಾ ಆತ್ಮಹತ್ಯೆ ಮತ್ತು ಗುಜರಾತ್‌ನ ಉನಾ ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿದ್ದ ಕೇಜ್ರಿವಾಲ್, ಇದೀಗ ದಲಿತ ಮತದಾರರ ಮನಗೆಲ್ಲಲು ಪ್ರಯತ್ನಿಸಿದ್ದಾರೆ. 
 
 ದೆಹಲಿ ವಿಧಾನಸಭೆಯ ಸಭಾಪತಿ ಬಂದನಾ ಕುಮಾರಿಯ ಬದಲಿಗೆ ದೆಹಲಿಯಲ್ಲಿ ದಲಿತ ಸಮುದಾಯದ ಶಾಸಕಿ ರಾಖಿ ಬಿರ್ಲಾ ಅವರನ್ನು ನೇಮಕ ಮಾಡಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ