ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಈ ಹಿಂದೆ ಇಡಿ ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು.
ಪ್ರವೀಣ್ ರಾವತ್ಗೆ ಸಂಬಂಧಿಸಿದ 9 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ 1,034 ಕೋಟಿ ರೂ. ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಸೇರಿದ ಸುಮಾರು 2 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.
ಹಣಕಾಸು ನಿಗಾ ಸಂಸ್ಥೆಯು ಪ್ರವೀಣ್ ರಾವತ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.