ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು 8 ಮಂದಿ ದಾರುಣ ಸಾವು

ಶುಕ್ರವಾರ, 20 ಅಕ್ಟೋಬರ್ 2017 (21:07 IST)
ಚೆನ್ನೈ : ಸರ್ಕಾರಿ ಬಸ್‌ ನಿಲ್ದಾಣದ ವಿಶ್ರಾಂತಿ ಕೊಠಡಿಯ ಮೇಲ್ಛಾವಣಿ ಕುಸಿದು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಪಟ್ಟಣಂ ಜಿಲ್ಲೆಯ ಪೊರಾಯರ್‌ ನಲ್ಲಿ ನಡೆದಿದೆ.

ಡಿಪೋದಲ್ಲಿ ಮಲಗಿದ್ದ 11 ಮಂದಿ ಪೈಕಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಿಲ್ದಾಣದ ಕಟ್ಟಡ 60 ವರ್ಷ ಹಳೆಯದ್ದಾಗಿದ್ದು, ಮೃತರೆಲ್ಲರೂ ಬಸ್‌ ಚಾಲಕರು ಮತ್ತು ನಿರ್ವಾಹಕರು ಎನ್ನಲಾಗಿದೆ.

ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮೃತರಿಗೆ ತಲಾ 7.5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ