ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

Sampriya

ಶನಿವಾರ, 23 ಆಗಸ್ಟ್ 2025 (21:14 IST)
ಪಾಟ್ನಾ: ಗಂಗಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ  ಬಿಹಾರದ ದಾನಿಯಾವಾನ್ ಬ್ಲಾಕ್ ವ್ಯಾಪ್ತಿಯ ಶಹಜಹಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಾನಿಯಾವಾನ್-ಹಿಲ್ಸಾ ರಸ್ತೆಯಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟವರು ನಳಂದ ಜಿಲ್ಲೆಯ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಡ್ಡಿ ಮಲಮಾ ಗ್ರಾಮದ ನಿವಾಸಿಗಳು. ಅವರು ಗಂಗಾದಲ್ಲಿ ಪವಿತ್ರ ಸ್ನಾನಕ್ಕಾಗಿ ಫತುಹಾಗೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 6:45 ರ ಸುಮಾರಿಗೆ ಆಟಪ ರಿಕ್ಷಾ ಮತ್ತು ಭಾರೀ ವಾಹನ (ಹೈವಾ) ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯ ಪೊಲೀಸರು, ಸಂಚಾರ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ತಕ್ಷಣವೇ ಅಪಘಾತದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಹೇಳಿದರು.  ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಆಡಳಿತವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ