ರಾಷ್ಟ್ರಪತಿ ಸ್ಥಾನಕ್ಕಾಗಿ ಚುನಾವಣೆ ದಿನಾಂಕ ಘೋಷಣೆ

ಬುಧವಾರ, 7 ಜೂನ್ 2017 (19:48 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಜುಲೈ 24ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ , ಜುಲೈ 17 ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ.
ಇಂದು ಸಂಜೆ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಚುನಾವಣೆ ಆಯುಕ್ತ ನಸೀಮ್ ಜೈದಿ, ಜುಲೈ 17 ರಂದು ರಾಷ್ಟ್ರಪತಿ ಸ್ಥಾನಕ್ಕೆ ಮತದಾನ ನಡೆಯಲಿದ್ದು, ಜುಲೈ 20 ರಂದು ಮತ ಏಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.  
 
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದ್ದು, ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ ಎಂದು ಕೇಂದ್ರ ಚುನಾವಣೆ ಆಯೋಗದ ಆಯುಕ್ತ ನಸೀಮ್ ಜೈದಿ ತಿಳಿಸಿದ್ದಾರೆ.
 
ಎನ್‌ಡಿಎ ಮೈತ್ರಿಕೂಟದಿಂದ ರಾಷ್ಟ್ರಪತಿ ಅಭ್ಯರ್ಥಿ ಕುರಿತ ಆಯ್ಕೆ ಅಂತಿಮವಾಗಿಲ್ಲ ಎನ್ನಲಾಗಿದೆ. ಯುಪಿಎ ಮೈತ್ರಿಕೂಟ ಕೂಡಾ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 
 

ವೆಬ್ದುನಿಯಾವನ್ನು ಓದಿ