ಚುನಾವಣೆ ಅಕ್ರಮ ನಡೆದಿದೆ ಎಂದ ರಾಹುಲ್ ಗಾಂಧಿಗೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಆಯೋಗ

Krishnaveni K

ಶುಕ್ರವಾರ, 25 ಜುಲೈ 2025 (17:21 IST)
ನವದೆಹಲಿ: ಚುನಾವಣೆ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿಗೆ ಸಾಕ್ಷಿ ಸಮೇತ ಚುನಾವಣಾ ಆಯೋಗ ತಿರುಗೇಟು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಸಂಸತ್ ಎದುರು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಆಯೋಗ ಪ್ರತ್ಯುತ್ತರ ನೀಡಿದೆ.

ಚುನಾವಣಾ ಆಯೋಗ ಕರ್ನಾಟಕದಲ್ಲಿ ಅಕ್ರಮ ಎಸಗಲು ಅವಕಾಶ ನೀಡಿರುವುದಕ್ಕೆ ನಮ್ಮ ಬಳಿ ಪುರಾವೆ ಇದೆ. ನಮ್ಮ ತಂಡ ಈ ಬಗ್ಗೆ ಅಧ್ಯಯನ ನಡೆಸಿದೆ. ಅಕ್ರಮವಾಗಿ ಮತದಾರರ ಹೆಸರು ತೆಗೆದಿರುವುದು, ಸೇರಿಸಿರುವುದು ಪತ್ತೆಯಾಗಿದೆ. ಚುನಾವಣಾ ಆಯೋಗದ ಹಿಂದೆ ನಾವು ಇದ್ದೇವೆ. ಈ ತಪ್ಪು ಮಾಡಿ ಆಯೋಗ ಸುಮ್ಮನೇ ಕೂರಲು ಸಾಧ್ಯವಿಲ್ಲ ಎಂದಿದ್ದರು.

ಅವರ ಈ ಹೇಳಿಕೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಆದರೆ ಈಗ ರಾಹುಲ್ ಗಾಂಧಿಗೆ ಚುನಾವಣಾ ಆಯೋಗವೇ ತಿರುಗೇಟು ನೀಡಿದೆ. ರಾಹುಲ್ ಹೇಳಿಕೆ ನಿರಾಧಾರ, ಸಂಪೂರ್ಣ ಸುಳ್ಳು ಎಂದಿದೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ಯಾವುದೇ ಸೋತ ಕಾಂಗ್ರೆಸ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿಲ್ಲ. ಎಲ್ಲಾ ಮತದಾರರ ಪಟ್ಟಿಗಳನ್ನೂ ಪಾರದರ್ಶಕವಾಗಿ ತಯಾರಿಸಲಾಗಿದೆ. ಆ ಪ್ರತಿಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ. ಇಂತಹ ಆಧಾರ ರಹಿತ ಆರೋಪಗಳನ್ನು ಯಾಕೆ ಮಾಡುತ್ತಿದ್ದೀರಿ ಎಂದೇ ನಮಗೆ ಅಚ್ಚರಿಯಾಗಿದೆ ಎಂದು ಚುನಾವಣಾ ಆಯೋಗ ಟ್ವೀಟ್ ಮಾಡಿದೆ. ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಅಥವಾ ಅಳಿಸುವಿಕೆ ಕುರಿತು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಆಗ ಕಾಂಗ್ರೆಸ್ ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆ ಸಲ್ಲಿಸಿಲ್ಲ. ಆದರೆ ಈಯ ಯಾಕೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆಯೋಗ ಪ್ರಶ್ನೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ