ಚುನಾವಣೆ : ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ

ಬುಧವಾರ, 18 ಜನವರಿ 2023 (07:34 IST)
ನವದೆಹಲಿ : 2024ರ ಜೂನ್ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ.

2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಸಿರುವುದು ಕುತೂಹಲ ಮೂಡಿಸಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಪಣತೊಟ್ಟಿದೆ.

ಹೀಗಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ನಡ್ಡಾ ಅವರ ಪ್ರಾಮುಖ್ಯತೆ ಅರಿತು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು, ಮುಂದಿನ ವರ್ಷದ ಜೂನ್ ವರೆಗೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ನೇತೃತ್ವದಲ್ಲಿ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ 2019 ಕ್ಕಿಂತ ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ