ಚುನಾವಣೆ : ತಾಯಿಯ ಆಶೀರ್ವಾದ ಪಡೆದ ಮೋದಿ

ಸೋಮವಾರ, 5 ಡಿಸೆಂಬರ್ 2022 (09:13 IST)
ಗಾಂಧಿನಗರ : ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್ಗೆ ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.

ನಾಳೆ ಗುಜರಾತ್ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ವಿಧಾನಸಭಾ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಹಮದಾಬಾದ್ನಲ್ಲಿ ಬೆಳಗ್ಗೆ 8:30ಕ್ಕೆ ಪ್ರಧಾನಿ ಮೋದಿ ಮತದಾನ ಮಾಡುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್ಗೆ ಬಂದಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ