ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹಟಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್.ವಿ ಭಟ್ಟಿ ಅವರಿದ್ದ ಪೀಠವು, ಜೂನ್ 25 ರಂದು ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜು.11 ರಂದು ಡಬ್ಲ್ಯೂಎಫ್ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.