2024ರ ಹೊತ್ತಿಗೆ ಬಿಜೆಪಿ ಅಂತ್ಯ ಶುರು : ಮಮತಾ ಬ್ಯಾನರ್ಜಿ

ಭಾನುವಾರ, 14 ಮೇ 2023 (11:22 IST)
ಕೊಲ್ಕತ್ತಾ : 2024ರ ಸಾರ್ವತ್ರಿಕ ಚುನಾವಣೆ ವೇಳೆಗೆ ಬಿಜೆಪಿ ಅಂತ್ಯ ಶುರುವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
 
ಜನ ಪ್ರಜಾಪ್ರಭುತ್ವವನ್ನು ಬಯಸಿದ್ದಾರೆ, ಅವರನ್ನು ತಡೆಯಲು ಸಾಧ್ಯವಿಲ್ಲ. ಕರ್ನಾಟಕದ ಜನತೆ ಬಿಜೆಪಿಯನ್ನು ಕೆಳಗಿಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಅಂತ್ಯ ಶುರುವಾಗಿದೆ. ಈ ನಿರ್ಧಾರ ತೆಗೆದುಕೊಂಡ ಕರ್ನಾಟದ ಮತದಾರರಿಗೆ ನಾನು ನಮಸ್ಕರಿಸುತ್ತೇನೆ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಜೆಡಿಎಸ್ ಪಕ್ಷ ಕೂಡ ಬಿಜೆಪಿ ಸೋಲಿಗೆ ಶ್ರಮಿಸಿದೆ ಎಂದಿದ್ದಾರೆ. 

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕದಲ್ಲಾದ ಪರಿಸ್ಥಿತಿ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಆಗಲಿದೆ. ಛತ್ತೀಸ್ಗಢ ಹಾಗೂ ಮಧ್ಯಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲಿದೆ. ಕಾಂಗ್ರೆಸ್ನ ಗೆಲುವು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ