ಮದರಸಾಗಳಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಲಾಗುತ್ತಿದೆಯೇ?: ಯುಪಿ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬುಧವಾರ, 2 ಸೆಪ್ಟಂಬರ್ 2015 (11:38 IST)
ರಾಷ್ಟ್ರೀಯ ಆಚರಣೆಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನಗಳಂದು ಮದರಸಾಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಾಗುತ್ತಿದೆಯೇ ಎಂಬುದನ್ನು  ಖಚಿತ ಪಡಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.
 
ಸರ್ಕಾರಿ ಸಂಸ್ಥೆಗಳು ಮತ್ತು ಇತರ ಖಾಸಗಿ ಸಂಸ್ಥೆಗಳಂತೆ ಮದರಸಾಗಳಲ್ಲಿ ಸಹ ಆಗಸ್ಟ್ 15 ಮತ್ತು ಜನವರಿ 26ರಂದು ತ್ರಿವರ್ಣ ಧ್ವಜಾರೋಹಣ ಸಮಾರಂಭವನ್ನು ನಡೆಸಲಾಗುತ್ತಿದೆಯೇ ಎಂಬುದನ್ನು ಖಚಿತ ಪಡಿಸಿ ಎಂದು ಸರ್ಕಾರಕ್ಕೆ ಸೂಚನೆ ನೀಡುವಂತೆ ಅಲಿಘಡ್‌ ನಗರದ ನಿವಾಸಿ ಅರುಣ್ ಗೌರ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
 
ಈ ಸಾರ್ವಜನಕಿ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಈ ಸರ್ಕಾರಕ್ಕೆ ಸೂಚನೆ ನೀಡಿದೆ. 
 
ಅಲ್ಲದೇ ಈ ಅರ್ಜಿಗೆ ಕೌಂಟರ್ ಅಫಿಡವಿಟ್ ಸಲ್ಲಿಸುವಂತೆ ಆದೇಶಿಸಿರುವ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ನಿಗದಿ ಪಡಿಸಿದೆ. 

ವೆಬ್ದುನಿಯಾವನ್ನು ಓದಿ