ವಿಪಕ್ಷದವರು ಕೂಡಾ ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗುತ್ತಿದ್ದರು: ಮೋದಿ

ಮಂಗಳವಾರ, 1 ಸೆಪ್ಟಂಬರ್ 2015 (17:13 IST)
ಬಿಹಾರ್‌ನಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಬಾಗಲ್ಪುರ್‌ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿ ನನ್ನ ವಿರೋಧಿಗಳು ಕೂಡಾ ಮೋದಿ ಮೋದಿ ಎಂದು ಕೂಗುತ್ತಿದ್ದರು ಎಂದು ಹೇಳಿದ್ದಾರೆ.
 
ಭಾಗಲ್ಪುರದ ಸಾರ್ವಜನಿಕ ಸಭೆಯಲ್ಲಿ ವಿಪಕ್ಷಗಳಾದ ಜೆಡಿಯು ಆರ್‌ಜೆಡಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಜಂಗಲ್ ರಾಜ್ ಅಂತ್ಯಗೊಳಿಸಲು ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬಿಹಾರ್ ಜನತೆ ಅಭಿವೃದ್ಧಿಗಾಗಿ ಬಿಜೆಪಿಗೆ ಮತಹಾಕಬೇಕು ಎಂದು ಕರೆ ನೀಡಿದರು. 
 
ಕಳೆದ ರವಿವಾರದಂದು ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರಕಾರದ ಭೂಸ್ವಾಧೀನ ಮಸೂದೆ ರೈತರಿಗೆ ಮಾರಕವಾಗಿ ಪರಿಣಮಿಸಿದೆ ಎಂದರು.  
 
ಪಾಟ್ನಾದಲ್ಲಿ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಬಿಹಾರ್ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ನಾಯಕ ಲಾಲು ಪ್ರಸಾದ್ ಯಾದವ್ ಉಪಸ್ಥಿತರಿದ್ದರು.
 
ಕಳೆದ ಆಗಸ್ಟ್ 18 ರಂದು ಮೋದಿ ಬಿಹಾರ್ ರಾಜ್ಯಕ್ಕೆ ಭೇಟಿ ನೀಡಿದಾಗ 1.25 ಲಕ್ಷ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದರು.
 

ವೆಬ್ದುನಿಯಾವನ್ನು ಓದಿ