ಪ್ರತಿಯೊಬ್ಬರು ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

ಬುಧವಾರ, 4 ಮೇ 2022 (13:05 IST)
ಪಾಟ್ನಾ : ಯಾವುದೇ ಧರ್ಮವನ್ನು ಲೆಕ್ಕಿಸದೇ ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಈದ್ ಸಂದರ್ಭದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರಾದರೂ ಅನ್ಯ ಧರ್ಮಕ್ಕೆ ಸೇರಿದವರಾಗಿದ್ದರೂ ಪರಸ್ಪರ ಗೌರವವನ್ನು ಹೊಂದಿರಬೇಕು. ನೀವು ಯಾವುದೇ ಧರ್ಮವನ್ನು ಅನುಸರಿಸಬಹುದು. ಆದರೆ ಪ್ರತಿಯೊಬ್ಬರೂ ಪರಸ್ಪರರ ಧರ್ಮವನ್ನು ಗೌರವಿಸಬೇಕು.

ದೇಶದಲ್ಲಿ ಒಂದು ನಿರ್ದಿಷ್ಟ ಧರ್ಮದ ಜನರು ತಮ್ಮ ಭಾವನೆಗಳಿಗೆ ಅನುಗುಣವಾಗಿ ವರ್ತಿಸುತ್ತಾರೆ ಮತ್ತು ಅವರು ತಮ್ಮದೇ ಆದ ಆಸೆಯನ್ನು ಹೊಂದಿದ್ದಾರೆ, ಅದನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.  

ಇದೇ ವೇಳೆ ಧ್ವನಿವರ್ಧಕ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕೇ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ನಿಷ್ಪ್ರಯೋಜಕ ಎಂದಿದ್ದಾರೆ. 

ರಾಜ್ಯದಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೆಚ್ಚುತ್ತಿರುವ ಗದ್ದಲದ ಬಗ್ಗೆ ಮಾತನಾಡಿದ ಅವರು, ಸಚಿವ ಜನಕ್ ರಾಮ್ ಅವರು ಕೇಸರಿ ಪಕ್ಷದ ನಾಯಕರ ಬಂಡಾಯವನ್ನು ಮುನ್ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ