ಮಾಜಿ ಸಚಿವ ನಾಗೇಂದ್ರನೇ ಮಾಸ್ಟರ್‌ ಮೈಂಡ್, ವಾಲ್ಮೀಕಿ ನಿಗಮ ಹಗರಣ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

Sampriya

ಮಂಗಳವಾರ, 10 ಸೆಪ್ಟಂಬರ್ 2024 (18:19 IST)
Photo Courtesy X
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

ದೋಷಾರೋಪ ಪಟ್ಟಿಯಲ್ಲಿ ನಾಗೇಂದ್ರ ಅಣತಿಯಂತೆ 187ಕೋಟಿ ರೂ ಹಗರಣ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.  

ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.


ನಾಗೇಂದ್ರ, ದದ್ದಲ್‌ ಹೆಸರು ಇರಲಿಲ್ಲ: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ  ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಆಗಸ್ಟ್‌ ತಿಂಗಳಿನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖವಾಗಿರಲಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ