ಮಾಜಿ ರಕ್ಷಣಾ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ

ಭಾನುವಾರ, 27 ಸೆಪ್ಟಂಬರ್ 2020 (09:37 IST)
ನವದೆಹಲಿ: ಬಿಜೆಪಿಯ ಹಿರಿಯ ಧುರೀಣ, ಮಾಜಿ ರಕ್ಷಣಾ ಸಚಿವ ಜಸ್ವಂತ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.


ಇಂದು ಬೆಳಿಗ್ಗೆ 6.55 ಕ್ಕೆ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಹ ಸಂಸ್ಥಾಪಕರಲ್ಲೊಬ್ಬರಾಗಿದ್ದ ಅವರು ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ