ದೆಹಲಿಯಲ್ಲಿ ಮಿತಿಮೀರುತ್ತಿರುವ ವಾಯುಮಾಲಿನ್ಯ; ಮುಖ್ಯ ಕಾರ್ಯದರ್ಶಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಗುರುವಾರ, 7 ನವೆಂಬರ್ 2019 (09:18 IST)
ನವದೆಹಲಿ : ದೆಹಲಿಯಲ್ಲಿ  ವಾಯುಮಾಲಿನ್ಯ ಮಿತಿಮೀರುತ್ತಿರುವ ಹಿನ್ನಲೆಯಲ್ಲಿ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.




ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ.  ವಾಯುಮಾಲಿನ್ಯ ತಡೆಗಟ್ಟಲು ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ರೈತರ ಮೇಲೆ ಗೂಬೆ ಕೂರಿಸುತ್ತಿದ್ದೀರಾ? ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಸುಪ್ರೀಂ ಕೋರ್ಟ್  ಅಧಿಕಾರಿಗಳನ್ನು ಪ್ರಶ್ನಿಸಿದೆ.


ಅಲ್ಲದೇ ಇದು ಕೋಟಿ ಜನರ ಬದುಕಿನ ಪ್ರಶ್ನೆ. ಈ ರೀತಿ ನಿರ್ಲಕ್ಷ್ಯ ತೋರುವುದು ಸರಿಯೇ? ನಿಮ್ಮ ವೈಫಲ್ಯ ನಿಮಗೆ ಗೊತ್ತಾಗುತ್ತಿಲ್ಲವೇ? ನಿಮ್ಮನ್ನೂ ಈ ಕೂಡಲೇ ಅಮಾನತುಗೊಳಿಸಬಹುದು ಎಂದು ಎಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ