ಚಂಡೀಗಢ : ವಾರಿಸ್ ಪಂಜಾಬ್ ದೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಸೇರಿ ಇತರರು ಪಾಕಿಸ್ತಾನದ ಐಎಸ್ಐ ಜೊತೆಗೆ ಲಿಂಕ್ ಹೊಂದಿರುವ ಶಂಕೆಯಿದೆ ಎಂದು ಪಂಜಾಬ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಮೃತ್ಪಾಲ್ ಸಿಂಗ್ನನ್ನ ಬಂಧಿಸುವ ಕಾರ್ಯಾಚರಣೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಪಂಜಾಬ್ ಐಜಿಪಿ ಸುಖಚೈನ್ ಸಿಂಗ್ ಗಿಲ್, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟಲಿಜೆನ್ಸ್ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸುಖಚೈನ್ ಸಿಂಗ್ ಗಿಲ್, ಐಎಸ್ಐ ಜೊತೆಗಿನ ದೃಷ್ಟಿಕೋನದಿಂದಲೂ ಈ ಪ್ರಕರಣವನ್ನ ತನಿಖೆ ನಡೆಸಲಾಗುತ್ತಿದ್ದು, ಇದುವರೆಗೆ ಕಂಡುಬಂದಿರುವ ಅಂಶಗಳ ಪ್ರಕಾರ ಐಎಸ್ಐ ಸಹ ಇದರಲ್ಲಿ ಭಾಗಿಯಾಗಿರುವ ಶಂಕೆಯಿದೆ. ಜೊತೆಗೆ ವಿದೇಶಿ ನಿಧಿ ಬಳಕೆಯಾಗಿರುವ ಬಗ್ಗೆಯೂ ಅನುಮಾನವಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.