ಉತ್ತರಪ್ರದೇಶ ಚುನಾವಣೆ: ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಸಂವಾದ
ಶುಕ್ರವಾರ, 29 ಜುಲೈ 2016 (13:15 IST)
ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
27 ಸಾಲ್ ಯುಪಿ ಬೇಹಾಲ್ ಎನ್ನುವ ಘೋಷಣೆಯೊಂದಿಗೆ ಬಸ್ ಯಾತ್ರೆಗೆ ಚಾಲನೆ ನೀಡಿದ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ ಕಾಂಗ್ರೆಸ್, ರಾಜ್ಯ ಘಟಕದ ಅಧ್ಯಕ್ಷ ರಾಜ್ ಬಬ್ಬರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ.
ನಗರದ ರಮಾಬಾಯಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಗಳಿವೆ. ಕಾರ್ಯಕರ್ತರ ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.