ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಮಾರಕ : ರಾಹುಲ್ ಗಾಂಧಿ

ಬುಧವಾರ, 16 ಮಾರ್ಚ್ 2022 (14:41 IST)
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್ಬುಕ್(ಮೇಟಾ) ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣೆ ಸಮಯದಲ್ಲಿ ಮತದಾರರನ್ನು ತಲುಪಲು ಬಿಜೆಪಿಗೆ ಮೇಟಾ ಸಹಾಯ ಮಾಡಿದೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಫೇಸ್ಬುಕ್ ಕೆಟ್ಟದ್ದು ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಅಲ್ ಜಜೀರಾ ಮತ್ತು ದಿ ರಿಪೋರ್ಟರ್ಸ್ ಕಲೆಕ್ಟಿವ್ನ ವರದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಫೇಸ್ಬುಕ್ ಬಿಜೆಪಿಗೆ ಚುನಾವಣಾ ಜಾಹೀರಾತುಗಳಿಗಾಗಿ ಕಡಿಮೆ ಬೆಲೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿಕೊಂಡಿದೆ. 

ಇಂದು ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ