ನಕಲಿ ಡಿಗ್ರಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೋರ್ಟ್ ನೋಟಿಸ್ ಜಾರಿ

ಶುಕ್ರವಾರ, 16 ಸೆಪ್ಟಂಬರ್ 2016 (11:49 IST)
ಕೇಂದ್ರ ಜವಳಿ ಖಾತೆ ಸಚಿವ ಸ್ಮೃತಿ ಇರಾನಿ ಚುನಾವಣೆ ಸಂದರ್ಭದಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ನೀಡಿದ್ದಾರೆ ಎನ್ನುವ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಇರಾನಿಗೆ ನೋಟಿಸ್ ನೀಡಬೇಕೋ ಅಥವಾ ಬೇಡವೋ ಎನ್ನುವ  ಬಗ್ಗೆ ದೆಹಲಿ ಹೈಕೋರ್ಟ್ ಮುಂದಿನ ತಿಂಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
 
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರವಿಂದರ್ ಸಿಂಗ್ ಇಂದು ನೋಟಿಸ್ ನೀಡಬೇಕಾಗಿದ್ದು, ಆದರೆ, ನೋಟಿಸ್ ಸಿದ್ದವಾಗಿಲ್ಲವಾದ್ದರಿಂದ ಮುಂದಿನ ಆಕ್ಟೋಬರ್ 1 ರಂದು ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಕೇಂದ್ರ ಸಚಿವೆ ಸ್ಮೃತಿ ಇರಾನಿ ನಕಲಿ ಶೈಕ್ಷಣಿಕ ದಾಖಲೆಗಳ ಕುರಿತು ಸೆಪ್ಟೆಂಬರ್ 3 ರಂದು ಅಹ್ಮೆರ್ ಖಾನ್ ಎನ್ನುವವರು ಹೈಕೋರ್ಟ್‌ಗೆ ದೂರು ಸಲ್ಲಿಸಿದ್ದರು. ಚುನಾವಣೆ ಆಯೋಗ ಮತ್ತು ದೆಹಲಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವರದಿ ನೀಡುವಂತೆ ಆದೇಶಿಸಿತ್ತು. ಇದೀಗ ವರದಿಯನ್ನು ಪರಿಶೀಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದೆ. 
 
ಚುನಾವಣೆ ಆಯೋಗಕ್ಕೆ ಸ್ಮೃತಿ ಇರಾನಿ ಸಲ್ಲಿಸಿದ ದಾಖಲೆಗಳು ಕಾಣೆಯಾಗಿದ್ದು, ಚುನಾವಣೆ ಆಯೋಗದ ವೆಬ್‌ಸೈಟ್ ಲಭ್ಯವಿವೆ ಎಂದು ಚುನಾವಣೆ ಆಯೋಗದ ಉನ್ನತ ಅಧಿಕಾರಿಯೊಬ್ಬರು ದೆಹಲಿ ಕೋರ್ಟ್‌ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ