ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿನಿ ಮೇಲೆ ಬಿದ್ದ ಫ್ಯಾನ್!
ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಪರೀಕ್ಷೆಗೆ ಎರಡು ದಿನದ ಮೊದಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದೆ.
ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಪುನಃ ಆಕೆ ಪರೀಕ್ಷೆಯನ್ನು ಬರೆದಿದ್ದಾಳೆ.
ಈ ಹಿಂದೆ ಏಪ್ರಿಲ್ 28 ರಂದು ಕರ್ನೂಲ್ನ ಗೋನೆಗಂಡ್ಲ್ದಲ್ಲಿರುವ ಮಂಡಲ ಪರಿಷತ್ ಉರ್ದು ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗ ಸೀಲಿಂಗ್ ಫ್ಯಾನ್ನ ಒಂದು ಭಾಗ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.