ಕೊಚ್ಚಿ : ಆರ್ಥಿಕ ಬಿಕ್ಕಟ್ಟಿನಿಂದಾಗಿ ತನ್ನ 11 ವರ್ಷದ ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ ಎರ್ನಾಕುಲಂ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಆರೋಪಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ. ಈ ಹಿನ್ನಲೆಯಲ್ಲಿ ತನ್ನ ಮಗಳನ ಜೊತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ. ಹಾಗಾಗಿ ಮಗಳನ್ನು ಸಂಬಂಧಿಕರನ್ನು ಭೇಟಿಯಾಗುವ ನೆಪದಲ್ಲಿ ಮನೆಯಿಂದ ಕರೆದೊಯ್ದು ಮಗಳ ಜತೆ ನದಿಗೆ ಹಾರಿದ್ದಾನೆ.
ಈ ಘಟನೆಯಲ್ಲಿ ಬಾಲಕಿ ಸಾವನಪ್ಪಿದ್ದಾಳೆ. ಆದರೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ವಿಚಾರ ಪೊಲೀಸ್ ತನಿಖೆಯಿಂದ ಬಯಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.