ಮದ್ಯದ ಅಮಲಿನಲ್ಲಿ ಮೂರು ವರ್ಷದ ಮಗಳ ಕೊಂದ ಅಪ್ಪ

ಗುರುವಾರ, 7 ಜುಲೈ 2022 (11:06 IST)
ಪಾಟ್ನಾ: ಮದ್ಯದ ಅಮಲಿನಲ್ಲಿ ಜನ್ಮಕೊಟ್ಟ ತಂದೆಯೇ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ  ಆರೋಪಿ ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಮೇಲೆ ಹಲ್ಲೆ ಮಾಡುತ್ತಿದ್ದ. ಈ ಬಾರಿಯೂ ಇದೇ ರೀತಿ ಪತ್ನಿ ಜೊತೆ ಜಗಳವಾಡಿಕೊಂಡು ಆಕೆ ಮೇಲೆ ಹಲ್ಲೆ ನಡೆಸಿದ್ದ.

ಪತ್ನಿ ಪ್ರತಿರೋಧಿಸಿದಾಗ ಮೂರು ವರ್ಷದ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಮಗು ಸಾವನ್ನಪ್ಪಿದೆ. ನೆರೆಹೊರೆಯವರಿಂದ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ