ತಾಯಿಗೆ ಕಿರುಕುಳ ನೀಡುತ್ತಿದ್ದ ಮಗನನ್ನು ಕೊಂದ ತಂದೆ
50 ವರ್ಷದ ವ್ಯಕ್ತಿಯನ್ನು ಈ ಸಂಬಂಧ ಬಂಧಿಸಲಾಗಿದೆ. ಕೊಲೆಗೀಡಾದ ಪುತ್ರ ಮದ್ಯವ್ಯಸನಿಯಾಗಿದ್ದ. ಕುಡಿಯಲು ಹಣ ಕೊಡುವಂತೆ ಸದಾ ತಾಯಿಗೆ ಹಿಂಸೆ ನೀಡುತ್ತಿದ್ದ.
ಘಟನೆ ನಡೆದ ದಿನವೂ ತಾಯಿ ಮೇಲೆ ಹಲ್ಲೆಗೆ ಮುಂದಾದಾಗ ಆತನಿಂದ ಚಾಕು ಪಡೆದು ತಂದೆಯೇ ಇರಿದು ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.