ಮಲ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

ಶುಕ್ರವಾರ, 11 ಫೆಬ್ರವರಿ 2022 (11:27 IST)
ಮುಂಬೈ : 14 ವರ್ಷದ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 45 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಕಳೆದ ವಾರ ಬಾಲಕಿಯ ತಾಯಿ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆರೋಪಿಯು ಎಚ್‍ಐವಿ ರೋಗ ಹೊಂದಿದ್ದಾನೆ. ಇದೀಗ ಆತನಿಂದ ಬಾಲಕಿಗೂ ಸೋಂಕು ತಗುಲಿದೆಯೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬಾಲಕಿ ತಾಯಿ ಕೂಡ ಎಚ್‍ಐವಿ ಸೋಂಕು ಹೊಂದಿದ್ದಾರೆ ಎಂದು ತಿಳಿಸಲಾಗಿದೆ.

ಇನ್ನೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಆರೋಪಿ ಬಾಲಕಿಗೆ ಬೆದರಿಕೆಯೊಡ್ಡಿದ್ದು, ಬಾಲಕಿಯು ತನ್ನ ನೆರೆಹೊರೆಯ ಮಹಿಳೆಯ ಬಳಿ ತನಗಾದ ಕಷ್ಟವನ್ನು ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ, 2012 ರ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಆಜಾದ್ ಮೈದಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮನೆಗೆ ಪೊಲೀಸರ ತಂಡ ಭೇಟಿ ನೀಡಿ ಅದೇ ರಾತ್ರಿ ಆತನನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ