ಪ್ರತಾಪ್ ಗರ್ : 12 ವರ್ಷದ ಹುಡುಗಿಯ ಮೇಲೆ ಆಕೆಯ ತಂದೆಯೇ ಮಾನಭಂಗ ಎಸಗಿದ ಘಟನೆ ಪ್ರತಾಪ ಗರ್ ನ ಕಂಧೈ ಪಲೀಸ್ ಠಾಣಾ ವ್ಯಕ್ತಿಯಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದು ಮನೆಗೆ ಬಂದ ತಂದೆ ಮದ್ಯದ ಅಮಲಿನಲ್ಲಿ ಮಲಗಿದ್ದ ಮಗಳ ಮೇಲೆ ಮಾನಭಂಗ ಎಸಗಿದ್ದಾನೆ. ಈ ಬಗ್ಗೆ ಮಗಳು ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ದೂರು ದಾಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಹಾಗೂ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.