5 ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್!

ಭಾನುವಾರ, 22 ಮೇ 2022 (14:40 IST)

ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕ ಕಡಿತ ಹಾಗೂ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ರಸಗೊಬ್ಬರಿಗಳಿಗೆ ಸಬ್ಸಿಡಿ ಸೇರಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ 5 ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ದೇಶದ ಜನತೆಗೆ ಸ್ವಲ್ಪ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ಪೆಟ್ರೋಲ್ ಮೇಲಿನ ಲೀಟರ್ ಗೆ 8 ರೂ.ಮತ್ತು ಡೀಸೆಲ್ ಮೇಲೆ ಲೀಟರ್ ಗೆ 6 ರೂ. ಅಬಕಾರಿ ಸುಂಕ ಇಳಿಸಿದೆ. ಇದರಿಂದ ಪೆಟ್ರೋಲ್ ದರ ಲೀಟರ್ ಗೆ 9.5 ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 7 ರೂ. ಏರಿಕೆ ಆಗಲಿದೆ.

ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆದವರಿಗೆ ಒಂದು ಗ್ಯಾಸ್ ಸಿಲಿಂಡರ್ ಗೆ 200ರೂ.ನಂತೆ ವರ್ಷಕ್ಕೆ 12ಕ್ಕೆ ಅಂದರೆ ವರ್ಷಕ್ಕೆ 1200 ರೂ. ಸಹಾಯಧನ ಘೋಷಿಸಲಾಗಿದೆ.

ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಛಾ ವಸ್ತುಗಳ ಆಮದು ಸುಂಕ ಕಡಿತಗೊಳಿಸಲಾಗಿದೆ. ಅಲ್ಲದೇ ಸ್ಟೀಲ್ ಉತ್ಪನ್ನಗಳ ಮೇಲಿನ ಆಮದು ಸುಂಕ ಕಡಿತಗೊಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ