ಆರ್ಥಿಕ ಸಂಕಷ್ಟ : 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ

ಬುಧವಾರ, 14 ಜೂನ್ 2023 (13:27 IST)
ನವದೆಹಲಿ : ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 15 ಸಾವಿರ ಸರ್ಕಾರಿ ನೌಕರರಿಗೆ ಇನ್ನೂ ಮಾಸಿಕ ವೇತನ ಪಾವತಿಯಾಗಿಲ್ಲ ಎಂದು ವರದಿಯಾಗಿದೆ.
 
ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಆದರೆ ಅರ್ಧ ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ರಾಜ್ಯ ಸಾರಿಗೆ ಇಲಾಖೆ, ವೈದ್ಯಕೀಯ ಕಾಲೇಜುಗಳು, ನೀರು ನಿರ್ವಹಣೆ, ಅರಣ್ಯ ಇಲಾಖೆಯ ಸಾವಿರಾರು ಸರ್ಕಾರಿ ನೌಕರರಿಗೆ ಇನ್ನೂ ಸಂಬಳ ಪಾವತಿಯಾಗಿಲ್ಲ. 15 ಸಾವಿರ ಸಿಬ್ಬಂದಿ ಪೈಕಿ ಹಿಮಾಚಲ ಪ್ರದೇಶ ಸಾರಿಗೆಯೊಂದರಲ್ಲೇ 13 ಸಾವಿರ ಸಿಬ್ಬಂದಿಗೆ ಸಂಬಳ ಪಾವತಿಸಬೇಕಿದೆ.  

ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಭರಪೂರ ಭರವಸೆಗಳನ್ನು ಪ್ರಕಟಿಸಿತ್ತು. ಈ ಭರವಸೆಗಳು ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಆರ್ಥಿಕ ಸಮಸ್ಯೆಯಲ್ಲಿರುವ ಸಿಎಂ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರ 1,000 ಕೋಟಿ ರೂಪಾಯಿಗಳ ಓವರ್ಡ್ರಾಫ್ಟ್ ಪಡೆಯಲು ಮುಂದಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ