ಶಸ್ತ್ರಾಸ್ತ್ರ ತರಬೇತಿ ಶಿಬಿರ: ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬುಧವಾರ, 25 ಮೇ 2016 (12:48 IST)
ಶಾಂತಿ, ಕೋಮುಸಾಮರಸ್ಯತೆಯನ್ನು ಉಲ್ಲಂಘಿಸಿ ಪದಾಧಿಕಾರಿಗಳಿಗಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ ಆರೋಪದ ಮೇಲೆ ಪೊಲೀಸರು 50 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
 
ಬಜರಂಗದಳ ಕಾರ್ಯಕರ್ತರ ವಿರುದ್ಧ ನಿನ್ನೆ ರಾತ್ರಿ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಕಳೆದ ಮೇ 10 ರಿಂದ ಪದಾಧಿಕಾರಿಗಳಿಗೆ ಶಸ್ತ್ರಾಸ್ತ್ರ ತರಬೇತಿ ಶಿಬಿರ ಹಮ್ಮಿಕೊಂಡು ಕಾನೂನುಬಾಹಿರ ಚಟುವಟಿಕೆ ನಡೆಸುತ್ತಾ, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಫೈಜಾಬಾದ್ ಪೊಲೀಸರು 50 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗುಪ್ತಾ ತಿಳಿಸಿದ್ದಾರೆ.
 
ಬಜರಂಗದಳ ಕಾರ್ಯಕರ್ತರಿಗೆ ಸ್ವರಕ್ಷಣೆಗಾಗಿ ಶಸಾಸ್ತ್ರ ತರಬೇತಿ ಶಿಬಿರವನ್ನು ಬಜರಂಗದಳ ಹಮ್ಮಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.
 
ಬಜರಂಗದಳ ಕಾರ್ಯಕರ್ತರು ಶಸ್ತ್ರಾಸ್ತ್ರ ತರಬೇತಿಗಾಗಿ ಬಳಸಲಾದ ಬಂದೂಕುಗಳು, ಕತ್ತಿ ಮತ್ತು ಲಾಠಿಗಳನ್ನು ಕೇಸರಿ ಪಡೆಗಳು ಬಳಸುತ್ತಿರುವ ವಿಡಿಯೋಗಳು ಸಾಮಾಜಿಕ ಅಂತರ್ಜಾಲ ತಾಣಗಳು ನ್ಯೂಸ್ ಚಾನೆಲ್‌ಗಳಲ್ಲಿ ವೈರಲ್ ಆಗಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ