ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲು!
ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ.
ಪ್ರಚಾರ ಮುಗಿದ ನಂತರವೂ ಮಾನಸಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿಧು ಮೂಸ್ ವಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎಎಪಿ ದೂರಿನ ಆಧಾರದ ಮೇಲೆ ಮಾನ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ