ತಮಿಳುನಾಡಿನ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್‌ಐಆರ್

ಭಾನುವಾರ, 18 ಜೂನ್ 2017 (13:30 IST)
ತಮಿಳುನಾಡಿನ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಂದ್ರ ಚುನಾವಣೆ ಆಯೋಗ ಸೂಚನೆ ನೀಡಿದೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ವಿ.ಶಶಿಕಲಾ ಸಂಬಂಧಿಯಾಗಿರುವ ಟಿಟಿವಿ ದಿನಕರನ್ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ.
 
ಆರ್‌.ಕೆ.ನಗರ್ ಉಪಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಸಿಎಂ ಪಳನಿಸ್ವಾಮಿ ಮತ್ತು ಶಶಿಕಲಾ ಸಂಬಂಧಿ ದಿನಕರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣೆ ಆಯೋಗ ಆದೇಶ ನೀಡಿದೆ.
 
ಮಾಜಿ ಸಿಎಂ ದಿವಂಗತ ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಬಣಗಳು ಒಡೆದು ಎರಡು ಭಾಗವಾಗಿದ್ದು, ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಉಂಟು ಮಾಡಿದೆ ಎಂದು ರಾಜಕೀಯ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ