ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್ಐಆರ್ ದಾಖಲು

ಬುಧವಾರ, 13 ಸೆಪ್ಟಂಬರ್ 2023 (13:31 IST)
ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ ಮೀರಾ ರೋಡ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಮುಂಜಾನೆ ತಮಿಳುನಾಡಿನ ಬಿಜೆಪಿ ನಿಯೋಗವು ಸನಾತನ ಧರ್ಮದ ವಿರುದ್ಧ ಸ್ಟಾಲಿನ್ ಹೇಳಿಕೆ ಕುರಿತು ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ರಾಜ್ಯ ಪೊಲೀಸರಿಗೆ ಮನವಿ ಪತ್ರ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ