ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಟಿಬಿಬಡಾವಣೆಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿದ್ದ ಒಂದು ದ್ವಿಚಕ್ರವಾಹನ, ಟಿವಿ, ಕೇಬಲ್ ವೈರ್ ಮತ್ತು ಗೃಹೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ದುಷ್ಕರ್ಮಿಗಳ ಕೃತ್ಯವಾಗಿರಬಹುದೆಂದು ಊಹಿಸಲಾಗಿದೆ.