ಸೇನಾಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ಅಕಸ್ಮಿಕ: 17 ಸೈನಿಕರ ಸಾವು

ಮಂಗಳವಾರ, 31 ಮೇ 2016 (11:27 IST)
ಭಾರತೀಯ ಸೇನೆಯ ಶಸ್ತ್ರಾಸ್ತ್ರ ಡಿಪೋದಲ್ಲಿ ಭಾರಿ ಪ್ರಮಾಣದ ಅಗ್ನಿ ಅಕಸ್ಮಿಕ ಸಂಭವಿಸಿದ್ದು, ಘಟನೆಯಲ್ಲಿ 17 ಸೈನಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ
 
ಅಗ್ನಿ ದುರಂತದಲ್ಲಿ ಇಬ್ಬರು ಸೇನಾಧಿಕಾರಿಗಳು 15 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಇತರ 17 ಮಂದಿ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೇನಾವಕ್ತಾರರು ಖಚಿತಪಡಿಸಿದ್ದಾರೆ.
 
ಸೇನಾ ಡಿಪೋದಲ್ಲಿ ಅಗ್ನಿ ದುರಂತ ಸಂಭವಿಸಿರುವುದಕ್ಕೆ ನಿಖರವಾದ ಕಾರಣಗಳು ಪತ್ತೆಯಾಗಿಲ್ಲ. ಇಂದು ಬೆಳಗಿನ ಜಾವ 2 ಗಂಟೆಗೆ ಸ್ಫೋಟದ ಶಬ್ದವಾದ ನಂತರ ಬೆಂಕಿ ಹೊತ್ತಿಕೊಂಡಿತು ಎನ್ನಲಾಗಿದೆ.
 
ನಾಗ್ಪುರ್‌ದಿಂದ 110 ಕಿ.ಮೀ ದೂರದಲ್ಲಿರುವ ಪುಲ್‌ಗಾಂವ್‌ನಲ್ಲಿರು ಸೇನಾ ಡಿಪೋದಲ್ಲಿ ಹೊತ್ತಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಹತ್ತಿರದಲ್ಲಿರುವ ಗ್ರಾಮಗಳನ್ನು ಜನರಿಂದ ಮುಕ್ತಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.   
 
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವನ್ನು ಪುಲ್ಗಾಂವ್‌ದಿಂದ 40 ಕಿ.ಮೀ ದೂರದಲ್ಲಿರುವ ಹತ್ತಿರದ ವಾರ್ದಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ಸೇನಾಧಿಕಾರಿಗಳು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದು, ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ನಾಳೆ ಪುಲ್ಗಾಂವ್‌ಗೆ ಭೇಟಿ ನೀಡಲಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ