ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಶನಿವಾರ, 10 ಅಕ್ಟೋಬರ್ 2020 (11:18 IST)
ನವದೆಹಲಿ :  ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯ ಯೋಧರು ಇಬ್ಬರು ಉಗ್ರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಉಗ್ರರು ಅಡಗಿರುವ ಬಗ್ಗೆ ನಿಖರ ಮಾಹಿತಿ ಪಡೆದ ಭಾರತೀಯ ಸೇನೆ ಜಮ್ಮು ಕಾಶ್ಮೀರ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣದ ಮೇಲೆ ದಾಳಿ ಮಾಡಿ ಗುಂಡಿನ ಚಕಮಕಿ ನಡೆಸಿದ್ದಾರೆ.

ಆ ವೇಳೆ ಇಬ್ಬರು ಉಗ್ರರು ಯೋಧರ ಗುಂಡಿಗೆ ಬಲಿಯಾಗಿದ್ದು. ಆದರೆ ಇನ್ನೂ ಉಗ್ರರ ಮೃತದೇಹವನ್ನು ಪಡೆದುಕೊಂಡಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ